ವಿಮೋಚನಕಾಂಡ 2:25 - ಪರಿಶುದ್ದ ಬೈಬಲ್25 ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಸ್ರಾಯೇಲ್ಯರನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು. ಅಧ್ಯಾಯವನ್ನು ನೋಡಿ |
ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.