ವಿಮೋಚನಕಾಂಡ 2:3 - ಪರಿಶುದ್ದ ಬೈಬಲ್3 ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.