ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.