ವಿಮೋಚನಕಾಂಡ 20:10 - ಪರಿಶುದ್ದ ಬೈಬಲ್10 ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಮಕ್ಕಳು ಹೆಣ್ಣು ಮಕ್ಕಳು ಗಂಡಾಳು ಹೆಣ್ಣಾಳು ಪಶುಗಳು ನಿನ್ನ ಊರಲ್ಲಿ ಇರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿ |
“ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.
ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.