ವಿಮೋಚನಕಾಂಡ 20:17 - ಪರಿಶುದ್ದ ಬೈಬಲ್17 “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತೊಬ್ಬನ ಮನೆಯನ್ನು ಆಶಿಸಬಾರದು; ಮತ್ತೊಬ್ಬನ ಹೆಂಡತಿ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.” ಅಧ್ಯಾಯವನ್ನು ನೋಡಿ |
ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.
ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.
ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.