ವಿಮೋಚನಕಾಂಡ 20:18 - ಪರಿಶುದ್ದ ಬೈಬಲ್18 ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು. ಅಧ್ಯಾಯವನ್ನು ನೋಡಿ |
ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.