ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.
ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.
ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.