ವಿಮೋಚನಕಾಂಡ 20:24 - ಪರಿಶುದ್ದ ಬೈಬಲ್24 “ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.
ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ!