Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:4 - ಪರಿಶುದ್ದ ಬೈಬಲ್‌

4 “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:4
41 ತಿಳಿವುಗಳ ಹೋಲಿಕೆ  

“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!


‘ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.


ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.


“ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!


“ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.


ಸದಾಕಾಲ ಜೀವಿಸುವ ದೇವರ ಮಹಿಮೆಯನ್ನು ಅವರು ಬಿಟ್ಟುಕೊಟ್ಟು ಮನುಷ್ಯರಂತಿರುವ, ಪಕ್ಷಿಗಳಂತಿರುವ, ಪ್ರಾಣಿಗಳಂತಿರುವ ಮತ್ತು ಹಾವುಗಳಂತಿರುವ ವಿಗ್ರಹಗಳನ್ನು ಮಾಡಿಕೊಂಡು ಅವುಗಳನ್ನು ಆರಾಧಿಸತೊಡಗಿದರು.


ಎಷ್ಟೋ ಜನರು ಸುಳ್ಳುದೇವರುಗಳನ್ನು ರೂಪಿಸಿಕೊಂಡು ನಿರಾಶರಾಗುವರು. ಅವರೆಲ್ಲರೂ ನಾಚಿಕೆಗೆ ಗುರಿಯಾಗುವರು.


“ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.


ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಬಗೆಯ ಕ್ರಿಮಿಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.


ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.


ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು.


ಅವರು ವಿಗ್ರಹಗಳ ಸೇವೆಮಾಡಿದರು. ಯೆಹೋವನು ಇಸ್ರೇಲರಿಗೆ, “ನೀವು ವಿಗ್ರಹಗಳನ್ನು ಪೂಜಿಸಲೇಬಾರದು” ಎಂದು ಹೇಳಿದ್ದನು.


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


“‘ನಾನು ಇಸ್ರೇಲ್ ಜನಾಂಗದವರಿಗೆ, ಅವರಲ್ಲಿದ್ದ ಅಸಹ್ಯವಾದ ಎಲ್ಲಾ ವಿಗ್ರಹಗಳನ್ನು ಬಿಸಾಡಿಬಿಡಲು ಹೇಳಿದೆನು. ಈಜಿಪ್ಟಿನ ಹೊಲಸು ವಿಗ್ರಹಗಳಿಂದ ಹೊಲಸು ಆಗಬಾರದು ಎಂದು ಹೇಳಿದೆನು. “ನಾನು ನಿಮ್ಮ ದೇವರಾದ ಯೆಹೋವನು” ಎಂಬುದಾಗಿ ಹೇಳಿದೆನು.


ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು