ವಿಮೋಚನಕಾಂಡ 20:7 - ಪರಿಶುದ್ದ ಬೈಬಲ್7 “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.