Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:9 - ಪರಿಶುದ್ದ ಬೈಬಲ್‌

9 ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:9
10 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.


“ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.


“ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.


“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


“ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.


ನೀವು ಆರು ದಿನಗಳಲ್ಲಿ ಆಹಾರವನ್ನು ಕೂಡಿಸಬೇಕು. ಆದರೆ ವಾರದ ಏಳನೆಯ ದಿನವು ಸಬ್ಬತ್ ದಿನವಾಗಿದೆ, ಅಂದರೆ ವಿಶ್ರಾಂತಿಯ ದಿನವಾಗಿದೆ. ಆದ್ದರಿಂದ ಆ ದಿನದಲ್ಲಿ ನೆಲದ ಮೇಲೆ ಯಾವ ಆಹಾರವೂ ಇರುವುದಿಲ್ಲ” ಅಂದನು.


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


ನೀವು ವಾಸಿಸುವ ಯಾವ ಸ್ಥಳದಲ್ಲಿಯೂ ಸಬ್ಬತ್‌ದಿನದಂದು ಬೆಂಕಿಯನ್ನು ಹೊತ್ತಿಸಬಾರದು” ಎಂದು ಹೇಳಿದನು.


ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು