ವಿಮೋಚನಕಾಂಡ 21:1 - ಪರಿಶುದ್ದ ಬೈಬಲ್1 ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಇಸ್ರಯೇಲರಿಗೆ ಈ ಕಟ್ಟಳೆಗಳನ್ನು ಕೊಡು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮತ್ತು ನೀನು ಅವರಿಗೆ ನೇವಿುಸಬೇಕಾದ ನ್ಯಾಯವಿಧಿಗಳು ಯಾವವಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಈಗ ಅವರ ಮುಂದೆ ನೀನು ಇಡತಕ್ಕ ನ್ಯಾಯವಿಧಿಗಳು ಇವೇ. ಅಧ್ಯಾಯವನ್ನು ನೋಡಿ |
ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.