Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:13 - ಪರಿಶುದ್ದ ಬೈಬಲ್‌

13 ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:13
13 ತಿಳಿವುಗಳ ಹೋಲಿಕೆ  

ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.


ನಾನು ನಿನಗೆ ಕೇಡುಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜ!’


ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


“ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.


ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.


ತರುವಾಯ ಯೆಹೋವನು ಯೆಹೋಶುವನಿಗೆ,


ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.


“ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು