Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:15 - ಪರಿಶುದ್ದ ಬೈಬಲ್‌

15 “ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆಯುವವನನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ತಂದೆಯನ್ನಾಗಲಿ, ತಾಯಿಯನ್ನಾಗಲಿ ಹೊಡೆದವನಿಗೆ ಮರಣ ದಂಡನೆ ಆಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ತಂದೆತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಮರಣದಂಡನೆ ಹೊಂದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:15
7 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ,


ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.


“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


“ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು