Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:16 - ಪರಿಶುದ್ದ ಬೈಬಲ್‌

16 “ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಒಬ್ಬನು ಮತ್ತೊಬ್ಬನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ, ಇಲ್ಲವೆ ಅವನು ಬಂಧನಕ್ಕೊಳಗಾದಾಗ ಅಪಹರಿಸಲಾದವನು ಅವನೊಂದಿಗಿದ್ದರೆ, ಅವನನ್ನು ಮರಣದಂಡನೆಗೆ ಗುರಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:16
8 ತಿಳಿವುಗಳ ಹೋಲಿಕೆ  

“ಒಬ್ಬನು ಇನ್ನೊಬ್ಬ ಇಸ್ರೇಲನನ್ನು ಕದ್ದುಕೊಂಡು ಹೋಗಿ ಅವನನ್ನು ಗುಲಾಮನನ್ನಾಗಿ ಮಾರಬಾರದು. ಹಾಗೆ ಮಾಡಿದವನನ್ನು ಸಾಯಿಸಬೇಕು. ನಿಮ್ಮ ಕುಲದಿಂದ ಅಂಥಾ ಪಾಪವನ್ನು ತೆಗೆದುಹಾಕಬೇಕು.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.


ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.


ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.


“ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆಯುವವನನ್ನು ಕೊಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು