Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:18 - ಪರಿಶುದ್ದ ಬೈಬಲ್‌

18 “ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇಬ್ಬರು ಜಗಳವಾಡುತ್ತಿರಲು ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಲೋ ಮುಷ್ಟಿಯಿಂದಲೋ ಹೊಡೆದುದರಿಂದ ಅವನು ಸಾಯದೆ ಗಾಯಗೊಂಡು ‘ಕೆಲವು ಕಾಲ ಹಾಸಿಗೆ ಹಿಡಿದಿರಬಹುದು, ಅನಂತರ ಎದ್ದು ಕೋಲೂರಿ ತಿರುಗಾಡುತ್ತಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಬ್ಬರು ಜಗಳವಾಡುತ್ತಿರಲಾಗಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆಯಲ್ಲಿ ಬಿದ್ದುಕೊಂಡು ತರುವಾಯ ಎದ್ದು ಕೋಲೂರಿಕೊಂಡು ತಿರುಗಾಡಿದರೆ ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಟಿಯಿಂದಾಗಲಿ ಹೊಡೆದದ್ದರಿಂದ ಅವನು ಸಾಯದೆ ಗಾಯಗೊಂಡು, ಹಾಸಿಗೆ ಹಿಡಿದು, ಕ್ರಮೇಣ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:18
8 ತಿಳಿವುಗಳ ಹೋಲಿಕೆ  

“ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು.


ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು.


“ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನಿಗೆ ಸಹಾಯಮಾಡಲಿಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡಸಿನ ಗುಪ್ತಾಂಗವನ್ನು ಹಿಡಿಯಬಾರದು.


“ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.


ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.


“ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನನ್ನೂ ಕೊಲ್ಲಬೇಕು.


ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು