ವಿಮೋಚನಕಾಂಡ 21:2 - ಪರಿಶುದ್ದ ಬೈಬಲ್2 “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ. ಅಧ್ಯಾಯವನ್ನು ನೋಡಿ |
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.