ವಿಮೋಚನಕಾಂಡ 21:22 - ಪರಿಶುದ್ದ ಬೈಬಲ್22 “ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಜನರು ಜಗಳವಾಡುವಾಗ ಗರ್ಭಿಣಿಯಾದ ಒಬ್ಬ ಹೆಂಗಸಿಗೆ ಏಟು ತಗಲಿ ಅವಳಿಗೆ ಗರ್ಭಸ್ರಾವ ಆಗಿ, ಬೇರೆ ಯಾವ ಹಾನಿಯೂ ಆಕೆಗೆ ಆಗದೆ ಇದ್ದಲ್ಲಿ, ಆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತುಮಾಡುತ್ತಾನೋ ಅಷ್ಟನ್ನು ಹೊಡೆದವನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದದರಿಂದ ಅವಳಿಗೆ ಗರ್ಭಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡುತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಜನರು ಜಗಳವಾಡುವಾಗ ಗರ್ಭಿಣಿಯಾದ ಸ್ತ್ರೀಗೆ ಏಟು ತಗಲಿ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು. ಅಧ್ಯಾಯವನ್ನು ನೋಡಿ |