Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:24 - ಪರಿಶುದ್ದ ಬೈಬಲ್‌

24 ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು, ಕೈಗೆ ಪ್ರತಿಯಾಗಿ ಕೈ, ಕಾಲಿಗೆ ಪ್ರತಿಯಾಗಿ ಕಾಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು, ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹಲ್ಲಿಗೆ ಹಲ್ಲು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:24
10 ತಿಳಿವುಗಳ ಹೋಲಿಕೆ  

“ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”


ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು