Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:28 - ಪರಿಶುದ್ದ ಬೈಬಲ್‌

28 “ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲೀಕನು ತಪ್ಪಿತಸ್ಥನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಎತ್ತೊಂದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ತಿವಿದು ಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಕೂಡದು. ಆ ಎತ್ತಿನ ಒಡೆಯನಾದರೋ ದೋಷಿಯಾಗಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದುಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು; ಅದರ ಮಾಂಸವನ್ನು ತಿನ್ನಕೂಡದು; ಆ ಎತ್ತಿನ ಒಡೆಯನೋ ನಿರ್ದೋಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಹಾಯ್ದು ಕೊಂದರೆ, ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆ ಎತ್ತಿನ ಯಜಮಾನನು ನಿರಪರಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:28
5 ತಿಳಿವುಗಳ ಹೋಲಿಕೆ  

ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.


ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.


ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲೀಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲೀಕನನ್ನೂ ಕೊಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು