Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:3 - ಪರಿಶುದ್ದ ಬೈಬಲ್‌

3 ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲದಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಮದುವೆಯಿಲ್ಲದವನಾಗಿ ಬಂದಿದ್ದರೆ ಒಂಟಿಗನಾಗಿಯೇ ಹೋಗಲಿ. ಹೆಂಡತಿಯುಳ್ಳವನಾಗಿ ಬಂದಿದ್ದರೆ ಹೆಂಡತಿಯೂ ಅವನ ಜೊತೆಯಲ್ಲಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಮದುವೆಯಿಲ್ಲದವನಾಗಿ ಬಂದಿದ್ದರೆ ಒಂಟಿಗನಾಗಿಯೇ ಹೊರಟುಹೋಗಬೇಕು. ಹೆಂಡತಿಯುಳ್ಳವನಾಗಿ ಬಂದಿದ್ದರೆ ಹೆಂಡತಿಯೂ ಅವನ ಜೊತೆಯಲ್ಲಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಒಬ್ಬನಾಗಿ ಬಂದಿದ್ದರೆ, ಒಬ್ಬನಾಗಿಯೇ ಹೋಗಬೇಕು. ಅವನು ಮದುವೆಯಾದವನಾಗಿದ್ದರೆ, ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:3
5 ತಿಳಿವುಗಳ ಹೋಲಿಕೆ  

“ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.


ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.


“ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.


ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು