ವಿಮೋಚನಕಾಂಡ 21:32 - ಪರಿಶುದ್ದ ಬೈಬಲ್32 ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ದಾಸನನ್ನಾದರೂ, ದಾಸಿಯನ್ನಾದರೂ ಎತ್ತು ಹಾಯ್ದರೆ, ದಾಸನ, ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಧ್ಯಾಯವನ್ನು ನೋಡಿ |