Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:34 - ಪರಿಶುದ್ದ ಬೈಬಲ್‌

34 ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ಗುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ಪ್ರಾಣಿಯ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ಪ್ರಾಣಿಯನ್ನು ತಾನೇ ತೆಗೆದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆ ಕುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ದನದ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ದನವನ್ನು ತಾನೇ ತೆಗೆದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:34
9 ತಿಳಿವುಗಳ ಹೋಲಿಕೆ  

“ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲೀಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು.


“ಒಬ್ಬನು ತನ್ನ ಹೊಲದಲ್ಲಿರುವ ಮುಳ್ಳಿನ ಪೊದೆಗಳನ್ನು ಸುಟ್ಟುಹಾಕಲು ಬೆಂಕಿಯನ್ನು ಹೊತ್ತಿಸಬಹುದು. ಆದರೆ ಬೆಂಕಿಯು ಹೆಚ್ಚಾಗಿ ಅವನ ನೆರೆಯವನ ಬೆಳೆಯನ್ನಾಗಲಿ ಬೆಳೆಯುತ್ತಿರುವ ಧಾನ್ಯಗಳನ್ನಾಗಲಿ ಸುಟ್ಟುಹಾಕಿದರೆ ಬೆಂಕಿಯನ್ನು ಹೊತ್ತಿಸಿದವನು ತಾನು ಸುಟ್ಟುಹಾಕಿದ ವಸ್ತುಗಳಿಗೆ ಪ್ರತಿಯಾಗಿ ಈಡುಕೊಡಬೇಕು.


“ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ,


“ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು.


ಅವನು ಕರುಣೆಯಿಲ್ಲದೆ ಇಂತಹ ಕೆಟ್ಟಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದು ಹೇಳಿದನು.


ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು