36 ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲೀಕನು ಅದನ್ನು ಕಟ್ಟಿಹಾಕದಿದ್ದರಿಂದ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು.
36 ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
36 ಆದರೆ ಅದಕ್ಕೆ ಮುಂಚಿತವಾಗಿಯೇ ಆ ಎತ್ತು ತಿವಿಯುವಂಥದ್ದೇ ಎಂದು ತಿಳಿದಿದ್ದರೂ ಅದರ ಒಡೆಯ ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
36 ಆದರೆ ಅದಕ್ಕೆ ಮುಂಚಿತವಾಗಿ ಆ ಎತ್ತು ಹಾಯುವಂಥದೇ ಎಂದು ತಿಳಿದಿದ್ದಾಗ್ಯೂ ಅದರ ಒಡೆಯನು ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.
36 ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿದ್ದರೂ, ಅದರ ಯಜಮಾನನು ಅದನ್ನು ಕಟ್ಟಿಹಾಕದೆ ಹೋಗಿದ್ದರೆ, ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲುಕೊಡಬೇಕು. ಆದರೆ ಸತ್ತ ಪಶುವನ್ನು ಅವನು ತೆಗೆದುಕೊಳ್ಳಬಹುದು.
ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲೀಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲೀಕನನ್ನೂ ಕೊಲ್ಲಬೇಕು.
“ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು.
“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು.