Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:7 - ಪರಿಶುದ್ದ ಬೈಬಲ್‌

7 “ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾವನಾದರೂ ತನ್ನ ಮಗಳನ್ನು ದಾಸಿಯಾಗುವದಕ್ಕೆ ಮಾರಿದರೆ ಪುರುಷರಾದ ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:7
4 ತಿಳಿವುಗಳ ಹೋಲಿಕೆ  

“ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”


ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.


ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು