Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:1 - ಪರಿಶುದ್ದ ಬೈಬಲ್‌

1 “ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ, ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯಿದರೆ ಇಲ್ಲವೆ ಮಾರಿದರೆ ಅವನು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು, ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದು ಕೊಯ್ದರೆ, ಇಲ್ಲವೆ ಅದನ್ನು ಮಾರಿದರೆ, ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ, ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:1
9 ತಿಳಿವುಗಳ ಹೋಲಿಕೆ  

ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಅವನು ಕರುಣೆಯಿಲ್ಲದೆ ಇಂತಹ ಕೆಟ್ಟಕಾರ್ಯವನ್ನು ಮಾಡಿದ್ದಕ್ಕಾಗಿ ಕುರಿಮರಿಯ ಬೆಲೆಯ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದು ಹೇಳಿದನು.


ಆದ್ದರಿಂದ ಅಂಥವನು ತನ್ನ ಪಾಪವನ್ನು ಅರಿಕೆಮಾಡಬೇಕು. ಅದಲ್ಲದೆ, ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.


ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲೀಕನು ಅದನ್ನು ಕಟ್ಟಿಹಾಕದಿದ್ದರಿಂದ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು.


ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು