Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:15 - ಪರಿಶುದ್ದ ಬೈಬಲ್‌

15 ಆದರೆ ಅದರ ಮಾಲೀಕನು ಪಶುವಿನೊಂದಿಗೆ ಅಲ್ಲಿದ್ದರೆ ಆಗ ನೆರೆಯವನು ಈಡುಕೊಡಬೇಕಾಗಿಲ್ಲ. ನೆರೆಯವನು ಪಶುವನ್ನು ಬಾಡಿಗೆಗೆ ತೆಗೆದುಕೊಂಡಿರುವಾಗ ಆ ಪಶು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅವನು ಈಡುಕೊಡಬೇಕಾಗಿಲ್ಲ. ಆ ಪಶುವನ್ನು ಉಪಯೋಗಿಸಲು ಅವನು ಕೊಟ್ಟ ಬಾಡಿಗೆಯೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡು ಕೊಡಬೇಕಾದ ಅವಶ್ಯಕತೆ ಇಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡ ಪಕ್ಷಕ್ಕೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣೆಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅದರ ಯಜಮಾನನು ಅದರ ಸಂಗಡ ಇದ್ದರೆ ಈಡು ಕೊಡದೆಯಿರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಎಣಿಕೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:15
5 ತಿಳಿವುಗಳ ಹೋಲಿಕೆ  

ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರುಬೀಳುವಂತೆ ನಾನು ಮಾಡಿದ್ದೆನು.


“ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲೀಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು.


“ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು.


ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.


ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲೆ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು