ವಿಮೋಚನಕಾಂಡ 22:17 - ಪರಿಶುದ್ದ ಬೈಬಲ್17 ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವಳ ತಂದೆ ಅವಳನ್ನು ಅವನಿಗೆ ಕೊಡಲು ಒಪ್ಪದೆ ಹೋದರೆ ಆ ವ್ಯಕ್ತಿ ತಕ್ಕ ತೆರವನ್ನು ಹೇಗೂ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವಳ ತಂದೆ ಅವಳನ್ನು ಅವನಿಗೆ ಕೊಡುವದಕ್ಕೆ ಒಪ್ಪದೆ ಹೋದರೆ ಆ ಮನುಷ್ಯನು ತಕ್ಕ ತೆರವನ್ನು ಹೇಗೂ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಕೆಯ ತಂದೆಗೆ ಆಕೆಯನ್ನು ಕೊಡುವುದಕ್ಕೆ ಮನಸ್ಸಿಲ್ಲದಿದ್ದರೆ, ಅವನಿಗೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು. ಅಧ್ಯಾಯವನ್ನು ನೋಡಿ |
ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.