Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:2 - ಪರಿಶುದ್ದ ಬೈಬಲ್‌

2-4 ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಬ್ಬ ಕಳ್ಳನು ಕಳ್ಳತನ ಮಾಡುತ್ತಿರುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 (ಕಳ್ಳನು ಕನ್ನ ಕೊರೆಯುತ್ತಿರುವಾಗಲೇ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:2
11 ತಿಳಿವುಗಳ ಹೋಲಿಕೆ  

ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.


ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವಂತೆ ಇದ್ದಕ್ಕಿದ್ದಂತೆ ಬರುತ್ತದೆ ಎಂಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.


ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


ಅವರನ್ನು ಬೇರೆಯವರು ಬಲವಂತದಿಂದ ಹೊರಗಟ್ಟುತ್ತಿದ್ದರು. ಕಳ್ಳರನ್ನೋ ಎಂಬಂತೆ ಜನರು ಅವರನ್ನು ಕಂಡು ಕೂಗಿಕೊಳ್ಳುತ್ತಿದ್ದರು.


ಕೊಲೆಗಾರನು ಮುಂಜಾನೆಯಲ್ಲಿ ಎದ್ದು ದಿಕ್ಕಿಲ್ಲದ ಬಡವರನ್ನು ಕೊಲ್ಲುವನು; ರಾತ್ರಿಯಲ್ಲಿ ಕಳವು ಮಾಡುವನು.


ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.


ದುಷ್ಟರು ರಾತ್ರಿಯ ಕತ್ತಲಲ್ಲಿ ಮನೆಗಳಿಗೆ ಕನ್ನ ಕೊರೆಯುವರು; ಹಗಲಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿದ್ದು ಬೆಳಕಿಗೆ ಮರೆಯಾಗಿರುವರು.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು