ವಿಮೋಚನಕಾಂಡ 22:20 - ಪರಿಶುದ್ದ ಬೈಬಲ್20 “ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನೊಬ್ಬನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞಮಾಡುವವನನ್ನು ನಾಶಪಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು. ಅಧ್ಯಾಯವನ್ನು ನೋಡಿ |
ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.