Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:21 - ಪರಿಶುದ್ದ ಬೈಬಲ್‌

21 “ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪರದೇಶದವನಿಗೆ ಅನ್ಯಾಯ ಮಾಡಬಾರದು ಉಪದ್ರವ ಕೊಡಬಾರದು ನೀವು ಐಗುಪ್ತ ದೇಶದಲ್ಲಿ ಪರದೇಶಿಗಳಾಗಿದ್ದೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪರದೇಶಸ್ಥನಿಗೆ ಅನ್ಯಾಯಮಾಡಬಾರದು, ಉಪದ್ರವಕೊಡಲೂಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶಸ್ಥರಾಗಿದ್ದಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:21
22 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವೂ ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದಿರಿ.


“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


“ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.


ವಿಧವೆಯರಿಗೂ ಅನಾಥರಿಗೂ ಹಾನಿಮಾಡಬೇಡಿರಿ. ಅಪರಿಚಿತರಿಗೂ ಬಡವರಿಗೂ ಕೇಡುಮಾಡಬೇಡಿ. ಒಬ್ಬರಿಗೊಬ್ಬರು ಕೇಡುಮಾಡಲು ಯೋಚಿಸಲೂಬೇಡಿ!’”


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.


“ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.


ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


“ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.


ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆಕೊಡಬಾರದು.


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ.


ಒಳ್ಳೆಯದನ್ನೇ ಮಾಡಲು ಅಭ್ಯಾಸಮಾಡಿಕೊಳ್ಳಿರಿ. ಬೇರೆಯವರೊಂದಿಗೆ ನ್ಯಾಯವಂತರಾಗಿರಿ; ಕೆಡುಕರಿಗೆ ದಂಡನೆ ವಿಧಿಸಿರಿ; ಅನಾಥರಿಗೆ ಸಹಾಯಮಾಡಿರಿ; ವಿಧವೆಯರಿಗೂ ಸಹಾಯಮಾಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು