ವಿಮೋಚನಕಾಂಡ 22:22 - ಪರಿಶುದ್ದ ಬೈಬಲ್22 “ನೀವೆಂದಿಗೂ ವಿಧವೆಯರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡುಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.