ವಿಮೋಚನಕಾಂಡ 22:27 - ಪರಿಶುದ್ದ ಬೈಬಲ್27 ಯಾಕೆಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯೆತೋರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನಿಗೆ ಬೇರೆ ಯಾವ ಹೊದಿಕೆಯಿಲ್ಲವಲ್ಲಾ; ಅದನ್ನೇ ಮೈಗೆ ಕಟ್ಟಿಕೊಳ್ಳಬೇಕು; ಬೇರೆ ಯಾವದನ್ನು ಸುತ್ತಿಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕೇಳುವೆನು; ನಾನು ದಯಾಪರನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು. ಅಧ್ಯಾಯವನ್ನು ನೋಡಿ |
“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.