ವಿಮೋಚನಕಾಂಡ 22:29 - ಪರಿಶುದ್ದ ಬೈಬಲ್29 “ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.