Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:9 - ಪರಿಶುದ್ದ ಬೈಬಲ್‌

9 “ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆ ವಿಷಯವಾದರೂ ಸರಿಯೇ ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ, ಇಬ್ಬರೂ ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾರೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎತ್ತು, ಕತ್ತೆ, ಕುರಿ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದುಹೋದ ಯಾವ ತರದ ವಸ್ತುಗಳ ವಿಷಯದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು, ‘ಇದು ತನ್ನದೆಂದು,’ ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ನ್ಯಾಯಾಧಿಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸುವರೋ, ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:9
17 ತಿಳಿವುಗಳ ಹೋಲಿಕೆ  

“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.


“ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.


“ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಏನಾದರೂ ಕೆಟ್ಟದ್ದನ್ನು ಮಾಡಿದರೆ, ಅವನನ್ನು ಈ ಯಜ್ಞವೇದಿಕೆಯ ಬಳಿಗೆ ಕರೆದು ತರುತ್ತಾರೆ. ಆ ವ್ಯಕ್ತಿಯು ತಪ್ಪಿತಸ್ಥನಲ್ಲದಿದ್ದರೆ, ಅವನು ಬಂದು ತಾನು ನಿರಪರಾಧಿಯೆಂದು ಪ್ರಮಾಣ ಮಾಡುತ್ತಾನೆ.


“ನಿನ್ನ ಸಹೋದರನಾಗಲಿ ಸಹೋದರಿಯಾಗಲಿ ನಿನಗೆ ಯಾವುದಾದರೂ ತಪ್ಪು ಮಾಡಿದರೆ, ನೀನು ಹೋಗಿ ಅವನೊಬ್ಬನೇ ಇರುವಾಗ ಅವನ ತಪ್ಪನ್ನು ತಿಳಿಸು. ಅವನು ನಿನ್ನ ಮಾತಿಗೆ ಕಿವಿಗೊಟ್ಟರೆ, ಮತ್ತೆ ನಿನ್ನ ಸಹೋದರನಾಗಿರಲು ನೀನೇ ಅವನಿಗೆ ಸಹಾಯ ಮಾಡಿದಂತಾಗುವುದು.


ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.


“ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.


“ಸ್ವಲ್ಪಕಾಲದವರೆಗೆ ತನ್ನ ಪಶುವನ್ನು ಪೋಷಿಸಬೇಕೆಂದು ತನ್ನ ನೆರೆಯವನನ್ನು ಕೇಳಿಕೊಳ್ಳಬಹುದು. ಈ ಪಶುವು ಕತ್ತೆಯಾಗಿರಬಹುದು, ಎತ್ತಾಗಿರಬಹುದು, ಕುರಿಯಾಗಿರಬಹುದು ಅಥವಾ ಯಾವುದೇ ಪಶುವಾಗಿರಬಹುದು. ಆದರೆ ಅದು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅಥವಾ ಕಳುವಾದರೆ,


ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ.


ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು