ವಿಮೋಚನಕಾಂಡ 23:15 - ಪರಿಶುದ್ದ ಬೈಬಲ್15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು. ಅಧ್ಯಾಯವನ್ನು ನೋಡಿ |
ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.