ವಿಮೋಚನಕಾಂಡ 23:16 - ಪರಿಶುದ್ದ ಬೈಬಲ್16 “ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿ |