Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:17 - ಪರಿಶುದ್ದ ಬೈಬಲ್‌

17 “ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ವರ್ಷಕ್ಕೆ ಮೂರು ಸಾರಿ ನಿಮ್ಮ ಗಂಡಸರೆಲ್ಲರು ಸರ್ವೇಶ್ವರನೂ ದೇವರೂ ಆದ ನನ್ನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರು ಕರ್ತನಾದ ಯೆಹೋವನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:17
11 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


“ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.


ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


“ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು.


ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?


ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.


ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು?


“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು