ವಿಮೋಚನಕಾಂಡ 23:18 - ಪರಿಶುದ್ದ ಬೈಬಲ್18 “ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನನಗೆ ಬಲಿಯನ್ನು ಅರ್ಪಿಸುವಾಗ ಆ ಬಲಿ ಪ್ರಾಣಿಯ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪ್ರಾಣಿಯ ಕೊಬ್ಬನ್ನು ಮಾರನೆಯ ದಿನದವರೆಗೂ ಇಡಲೇಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಜಾತ್ರೆಯಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ವಪೆಯನ್ನು ಮಾರಣೆ ದಿನದವರೆಗೂ ಇಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು. ಅಧ್ಯಾಯವನ್ನು ನೋಡಿ |