ವಿಮೋಚನಕಾಂಡ 23:21 - ಪರಿಶುದ್ದ ಬೈಬಲ್21 ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.