ವಿಮೋಚನಕಾಂಡ 23:22 - ಪರಿಶುದ್ದ ಬೈಬಲ್22 ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು. ಅಧ್ಯಾಯವನ್ನು ನೋಡಿ |