Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:24 - ಪರಿಶುದ್ದ ಬೈಬಲ್‌

24 “ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:24
29 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.


“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.


ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.


ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.


ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.


ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸ್ವಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನ್ನೂ ಭಯಂಕರವಾದ ಕೆಲಸಗಳನ್ನು ನೀನು ಮಾಡಿರುವೆ.


ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


“ನೀವು ಆ ಜನರೊಡನೆಯಾಗಲಿ ಅವರ ದೇವರುಗಳೊಡನೆಯಾಗಲಿ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾಮನು ಮಾಡಿದನು. ಆದರೆ ಯೋರಾಮನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿಸಿದನು.


ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.


“ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.


ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಆದ್ದರಿಂದ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ಪೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು.


ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.


ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ಇದ್ದನು.


ಎದೋಮ್ಯರನ್ನು ಸೋಲಿಸಿ ಅಮಚ್ಯನು ಮನೆಗೆ ಹಿಂದಿರುಗಿ ಬಂದನು. ಸೇಯೀರಿನ ಜನರು ಪೂಜಿಸುತ್ತಿದ್ದ ವಿಗ್ರಹಗಳನ್ನು ತನ್ನೊಂದಿಗೆ ತಂದನು. ಅವನು ಅವುಗಳನ್ನು ಪೂಜಿಸತೊಡಗಿ ಅಡ್ಡಬಿದ್ದು ಧೂಪ ಹಾಕಿದನು.


ಇಸ್ರೇಲ್ ಜನರು ದೇವರನ್ನು ಮೋಸಪಡಿಸಲು ನೋಡಿದರು. ಆದರೆ ಈಗ ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯೆಹೋವನು ಅವರು ಯಜ್ಞವೇದಿಕೆಗಳನ್ನು ನಾಶಮಾಡುವನು. ಅವರ ಸ್ಮಾರಕಕಲ್ಲುಗಳನ್ನು ಆತನು ಪುಡಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು