Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:25 - ಪರಿಶುದ್ದ ಬೈಬಲ್‌

25 ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:25
26 ತಿಳಿವುಗಳ ಹೋಲಿಕೆ  

ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.


ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.


ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.


“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ಆದರೆ ಜನರು, “ಇಲ್ಲ! ನಾವು ಯೆಹೋವನ ಸೇವೆ ಮಾಡುತ್ತೇವೆ” ಎಂದು ಹೇಳಿದರು.


ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಅಂಥವರು ಉನ್ನತವಾದ ಸ್ಥಳದಲ್ಲಿ ಸುರಕ್ಷಿತವಾಗಿ ವಾಸಿಸುವರು. ಎತ್ತರವಾದ ಬಂಡೆಕಲ್ಲಿನ ಕೋಟೆಯೊಳಗೆ ಅವರು ಕಾಪಾಡಲ್ಪಡುವರು. ಅವರ ಬಳಿ ಆಹಾರ ಮತ್ತು ನೀರು ಯಾವಾಗಲೂ ಇರುವದು.


ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


“ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಜ್ಞಾಪಕಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ.


ತನ್ನ ಜೀವಿತವು ಅಲ್ಪಕಾಲದ್ದೆಂದು ಅವನು ನೆನಪುಮಾಡಿಕೊಳ್ಳಬೇಕು. ಯಾಕೆಂದರೆ ಅವನನ್ನು ಅವನಿಗೆ ಇಷ್ಟವಾದ ಕೆಲಸದಲ್ಲಿ ನಿರತನನ್ನಾಗಿ ಮಾಡಿರುವಾತನು ದೇವರೇ.


ಹತ್ತು ದಿನಗಳ ತರುವಾಯ ದಾನಿಯೇಲ ಮತ್ತು ಅವನ ಸ್ನೇಹಿತರು ಅರಸನ ಆಹಾರವನ್ನು ಊಟಮಾಡಿದ ಇತರ ಎಲ್ಲ ತರುಣರಿಗಿಂತ ಆರೋಗ್ಯವಂತರಾಗಿ ಕಾಣಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು