Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:28 - ಪರಿಶುದ್ದ ಬೈಬಲ್‌

28 ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮಗೆ ಮುಂಚಿತವಾಗಿ ಕಣಜದ ಹುಳುಗಳನ್ನು ಕಳಿಸುವೆನು. ಅವು, ಆ ಹಿವ್ವಿಯರು, ಕಾನಾನ್ಯರು ಹಾಗೂ ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಓಡಿಸಿ ಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಲ್ಲದೆ ಕಡಜದ ಹುಳಗಳನ್ನು ನಿಮ್ಮ ಮುಂಚಿತವಾಗಿ ಕಳುಹಿಸುವೆನು; ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:28
7 ತಿಳಿವುಗಳ ಹೋಲಿಕೆ  

“ನಿಮ್ಮಿಂದ ತಪ್ಪಿಸಿಕೊಂಡು ಅಡಗಿಕೊಳ್ಳುವ ಜನರನ್ನು ಶಿಕ್ಷಿಸಲು ದೇವರು ಕಡಜದ ಹುಳಗಳನ್ನು ಅವರ ಮಧ್ಯಕ್ಕೆ ಕಳುಹಿಸುವನು ಮತ್ತು ಅವರನ್ನೆಲ್ಲಾ ನಾಶಮಾಡುವನು.


ಇದು ಕೇನಿಯರ, ಕೆನಿಜೀಯರ, ಕದ್ಮೋನಿಯರ,


ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.


ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.


“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು