Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:33 - ಪರಿಶುದ್ದ ಬೈಬಲ್‌

33 ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು; ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಾರು; ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:33
17 ತಿಳಿವುಗಳ ಹೋಲಿಕೆ  

ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.


ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”


ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.


ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.


ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!


ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.


ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.


ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.


ಯಾಕೆಂದರೆ ಆಗ ಅವರು ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ; ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಮಾಡುವ ಭಯಂಕರ ಕೃತ್ಯಗಳನ್ನು ಮಾಡುವಂತೆ ನಿಮಗೆ ಉಪದೇಶಿಸಲು ಸಾಧ್ಯವಾಗುವುದಿಲ್ಲ.


ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಈ ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಆ ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.


ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು