ವಿಮೋಚನಕಾಂಡ 23:5 - ಪರಿಶುದ್ದ ಬೈಬಲ್5 “ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಹಗೆಯವನ ಕತ್ತೆ ಹೊರೆಯನ್ನು ತಾಳದೆ ಕೆಳಗೆ ಬಿದ್ದಿರುವುದನ್ನು ಕಂಡರೆ ಅದನ್ನು ಎಬ್ಬಿಸುವುದಕ್ಕೆ ನಿನಗೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಅದನ್ನು ಎಬ್ಬಿಸಲೇ ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ಹಗೆಯವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ಕಂಡರೆ ಅದನ್ನು ಎಬ್ಬಿಸುವದಕ್ಕೆ ಮನಸ್ಸಿಲ್ಲದೆ ಹೋದಾಗ್ಯೂ ಅವನಿಗೆ ಸಹಾಯಮಾಡಿ ಎಬ್ಬಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮನ್ನು ಹಗೆ ಮಾಡುವವನ ಕತ್ತೆಯು ತನ್ನ ಹೊರೆಯ ಕೆಳಗೆ ಬಿದ್ದಿರುವುದನ್ನು ನೀವು ಕಂಡಾಗ, ಅವನಿಗೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದಿದ್ದರೂ ನೀವು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು. ಅಧ್ಯಾಯವನ್ನು ನೋಡಿ |