Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:9 - ಪರಿಶುದ್ದ ಬೈಬಲ್‌

9 “ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಪರದೇಶೀಯರನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದಿರಲ್ಲವೆ? ಅಂಥವರ ಮನೋವ್ಯಥೆ ನಿಮಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪರದೇಶಸ್ಥರಿಗೆ ಉಪದ್ರವಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶಸ್ಥರಾಗಿದ್ದಿರಷ್ಟೆ; ಅಂಥವರ ಮನೋವ್ಯಥೆಯನ್ನು ತಿಳಿದೇ ಇರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಪರದೇಶಿಯರನ್ನು ಪೀಡಿಸಬಾರದು. ಏಕೆಂದರೆ ಈಜಿಪ್ಟ್ ದೇಶದಲ್ಲಿ ನೀವೂ ಪರದೇಶಿಗಳಾದ್ದಿರಷ್ಟೇ, ಅಂಥವರ ಮನೋವ್ಯಥೆಯನ್ನು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:9
13 ತಿಳಿವುಗಳ ಹೋಲಿಕೆ  

“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


ಹೀಗಿರಲು ನಾನು ನಿನಗೆ ಕರುಣೆ ತೋರಿದಂತೆ ನಿನ್ನ ಜೊತೆ ಸೇವಕನಿಗೂ ನೀನು ಕರುಣೆ ತೋರಿಸಬೇಕಿತ್ತು’ ಎಂದು ಹೇಳಿ


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.


ಆದ್ದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವೂ ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದಿರಿ.


ಆದರೆ ಆ ವ್ಯಕ್ತಿಯು ಸಾಯದೆ ಕೆಲವು ದಿನಗಳ ನಂತರ ಗುಣವಾದರೆ ಯಜಮಾನನಿಗೆ ಶಿಕ್ಷೆಯಾಗಬಾರದು. ಯಾಕೆಂದರೆ ಯಜಮಾನನು ಹಣವನ್ನು ಕೊಟ್ಟು ಆ ವ್ಯಕ್ತಿಯನ್ನು ಕೊಂಡುಕೊಂಡಿದ್ದಾನೆ ಮತ್ತು ಆ ವ್ಯಕ್ತಿಯು ಅವನ ಸ್ವತ್ತಾಗಿದ್ದಾನೆ.


“ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.


“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.


“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು