12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.
12 ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
12 ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು.
12 ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ
12 ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.
ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.
ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.
ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.
ಮರಣವನ್ನು ವಿಧಿಸುವ ಸೇವೆಯು (ಧರ್ಮಶಾಸ್ತ್ರ) ಕಲ್ಲಿನ ಹಲಗೆಗಳ ಮೇಲೆ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ಅದು ದೇವರ ಮಹಿಮೆಯೊಂದಿಗೆ ಬಂದಿತು. ಮೋಶೆಯ ಮುಖವು ಪ್ರಕಾಶಮಾನವಾಗಿ ಹೊಳೆಯುತ್ತಿದ್ದುದರಿಂದ ಇಸ್ರೇಲರು ಅವನ ಮುಖವನ್ನು ನೋಡಲಾರದೆ ಹೋದರು. ಆ ಬಳಿಕ ಆ ಮಹಿಮೆಯು ಕುಂದಿಹೋಯಿತು.
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.
ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.
ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಈ ಕಲ್ಲುಗಳ ಮೇಲೆ ಬರೆಯುವೆನು.
ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.
ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.