14 ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು.
14 ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು.
14 ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು.
14 ಮೊದಲು ಅವನು ಹಿರಿಯರಿಗೆ - ನಾವು ತಿರಿಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರ್ರಿ; ಆರೋನನೂ ಹೂರನೂ ನಿಮ್ಮ ಬಳಿಯಲ್ಲಿದ್ದಾರಷ್ಟೆ; ಯಾವನಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ ಎಂದು ಹೇಳಿದನು.
14 ಆಗ ಮೋಶೆ ಹಿರಿಯರಿಗೆ, “ನಾವು ನಿಮ್ಮ ಬಳಿಗೆ ತಿರುಗಿ ಬರುವವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರಿ. ಆರೋನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿಗಾದರೂ ವ್ಯಾಜ್ಯವಿದ್ದರೆ ಅವರ ಬಳಿಗೆ ಹೋಗಲಿ,” ಎಂದನು.
ಸ್ವಲ್ಪ ಸಮಯದ ನಂತರ ಮೋಶೆಯ ತೋಳುಗಳು ಆಯಾಸಗೊಂಡವು. ಆದ್ದರಿಂದ ಅವರು ಒಂದು ದೊಡ್ಡಕಲ್ಲನ್ನು ಇಟ್ಟು ಮೋಶೆಯನ್ನು ಅದರ ಮೇಲೆ ಕುಳ್ಳಿರಿಸಿದರು. ಬಳಿಕ ಆರೋನನು ಮತ್ತು ಹೂರನು ಮೋಶೆಯ ಕೈಗಳನ್ನು ಮೇಲೆತ್ತಿ ಹಿಡಿದುಕೊಂಡರು. ಆರೋನನು ಮೋಶೆಯ ಒಂದು ಕಡೆಯಲ್ಲಿದ್ದನು; ಹೂರನು ಮೋಶೆಯ ಇನ್ನೊಂದು ಕಡೆಯಲ್ಲಿದ್ದನು. ಸೂರ್ಯನು ಮುಳುಗುವವರೆಗೆ ಅವರು ಅವನ ಕೈಗಳನ್ನು ಮೇಲೆತ್ತಿ ಹಿಡಿದರು.
ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.
“ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.
ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.
ಅವರೊಳಗೆ ವ್ಯಾಜ್ಯವಿದ್ದರೆ ಅವರು ನನ್ನ ಬಳಿಗೆ ಬರುತ್ತಾರೆ. ಯಾವನು ನ್ಯಾಯವಂತನೆಂದು ನಾನು ತೀರ್ಮಾನಿಸುತ್ತೇನೆ. ಈ ರೀತಿಯಾಗಿ ನಾನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸುತ್ತೇನೆ” ಅಂದನು.