Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:16 - ಪರಿಶುದ್ದ ಬೈಬಲ್‌

16 ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಯೆಹೋವ ದೇವರ ಮಹಿಮೆಯು ಸೀನಾಯಿ ಬೆಟ್ಟದ ಮೇಲೆ ನೆಲೆಯಾಗಿದ್ದುದರಿಂದ ಮೇಘವು ಅದನ್ನು ಆರು ದಿನಗಳವರೆಗೆ ಮುಚ್ಚಿಕೊಂಡಿತು. ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:16
14 ತಿಳಿವುಗಳ ಹೋಲಿಕೆ  

ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.


ಮೋಶೆ ಆರೋನರನ್ನು ಎದುರಿಸಲು ಜನರು ಒಟ್ಟಾಗಿ ಸೇರಿಬಂದಿದ್ದಾಗ, ದೇವದರ್ಶನಗುಡಾರದ ಕಡೆಗೆ ತಿರುಗಿ ನೋಡಲಾಗಿ, ದೇವದರ್ಶನಗುಡಾರವನ್ನು ಮೋಡ ಮುಚ್ಚಿಕೊಂಡಿರುವುದನ್ನೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಗಿರುವುದನ್ನೂ ಅವರು ಕಂಡರು.


ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸ್ವರವನ್ನು ಕೇಳಿದೆನು.


ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.


ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,


ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.


ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.


ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.


ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.


ಮೋಶೆ, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.


ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು